ಅಭಿಪ್ರಾಯ / ಸಲಹೆಗಳು

ಕುಲಪತಿಗಳಿಗೆ ವಿಶೇಷ ಅಧಿಕಾರಿ

 

ಶ್ರೀ. ಈರನಗೌಡ ಬಿ ಬಿರಾದಾರ್

ಕುಲಪತಿಗಳಿಗೆ ವಿಶೇಷ ಅಧಿಕಾರಿ 
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ 

 

          ಶ್ರೀ. ಈರನಗೌಡ ಬಿರಾದಾರ, ಸಹಾಯಕ ಪ್ರಾಧ್ಯಾಪಕರು (ಇತಿಹಾಸ), ಇವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ 2010 ರಿಂದ ಪೂರ್ಣಕಾಲಿಕ ಸಹಾಯಕ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದಾರೆ. ಇವರು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಷಯದಲ್ಲಿ 2002ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಸ್ನಾತಕೋತ್ತರ ಪದವಿ ಹೊಂದಿರುತ್ತಾರೆ. ತಮ್ಮ ಪಿ.ಎಚ್.ಡಿ. ಮಹಾಪ್ರಭಂದವನ್ನು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡಕ್ಕೆ ಮಂಡಿಸಿದ್ದಾರೆ. ಇವರು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)ನ್ನು 2005ರಲ್ಲಿ ಉತ್ತಿರ್ಣರಾಗಿದ್ದಾರೆ. ಇವರು 2003-04ರಲ್ಲಿ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಅಥಿತಿ ಉಪನ್ಯಾಸಕರಾಗಿ ಹಾಗೂ 2004-05ರಲ್ಲಿ ಕೆ.ಎಲ್.ಇ. ಸಂಸ್ಥೆಯ ಎಸ್.ಕೆ. ಕಲಾ ಮತ್ತು ಎಚ್.ಎಸ್.ಕೆ. ವಿಜ್ಞಾನ ಮಹಾವಿದ್ಯಾಲಯದಲ್ಲಿ ಪೂರ್ಣಕಾಲಿಕ ಉಪನ್ಯಾಸಕರಾಗಿ ಸೇವೆಸಲ್ಲಿಸಿದ್ದಾರೆ. ಸದರಿಯವರು ವಿವಿಧ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನಗಳಲ್ಲಿ ಭಾಗವಹಿಸಿ ಲೇಖನಗಳನ್ನು ಮಂಡಿಸಿರುತ್ತಾರೆ.

ಪ್ರಸ್ತುತ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಹಾಗೂ ಉಪಕುಲಪತಿಗಳ ವಿಶೇಷ ಅಧಿಕಾರಿಯಾಗಿದ್ದಾರೆ.

ಇತ್ತೀಚಿನ ನವೀಕರಣ​ : 29-08-2023 01:37 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080